ಶಿವಮೊಗ್ಗ (shivamogga), ಅಕ್ಟೋಬರ್ 17: ಶಿವಮೊಗ್ಗ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 17 ರ ಸಂಜೆ ದಿಢೀರ್ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಅಕ್ಟೋಬರ್ 18 ರಂದು ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ಜಲ ಮಂಡಳಿ ಆಡಳಿತ ತಿಳಿಸಿದೆ.
ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ, ಕೃಷ್ಣ ರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಇದರಿಂದ ನಗರದ ವಿವಿಧೆಡೆಯ ಓವರ್ ಹೆಡ್ ಟ್ಯಾಂಕ್ ಗಳಿಗೆ ನೀರು ಶೇಖರಣೆಯಲ್ಲಿ ಏರುಪೇರಾಗಲಿದೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 18 ರಂದು ನಗರದ ವಿವಿಧೆಡೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಸಹಕರಿಸುವಂತೆ ಜಲ ಮಂಡಳಿ ಆಡಳಿತ ತಿಳಿಸಿದೆ.
shivamogga : The Shivamogga Water Board administration has stated that there is a possibility of disruption in drinking water supply in various parts of the city on October 18 due to sudden emergency maintenance work being carried out at the Mandli Power Distribution Center in Shivamogga on the evening of October 17.

