Children under 18 years of age banned from fireworks shops in Shivamogga district! ಶಿವಮೊಗ್ಗ ಜಿಲ್ಲೆಯ ಪಟಾಕಿ ಮಾರಾಟ ಅಂಗಡಿಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

shimoga news | ಶಿವಮೊಗ್ಗ ಜಿಲ್ಲೆಯ ಪಟಾಕಿ ಮಾರಾಟ ಅಂಗಡಿಗಳಲ್ಲಿ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ!

ಶಿವಮೊಗ್ಗ (shivamogga), ಆಕ್ಟೋಬರ್ 18: ಶಿವಮೊಗ್ಗ ಜಿಲ್ಲೆಯ ಹಾಗೂ ತಾಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು – ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ, 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು

ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Firecracker shops opened during Diwali festival in Shivamogga district and taluk centers have been banned from employing children under the age of 18 in the manufacturing of firecrackers and other processes.

Shivamogga - Bhadravati rail route review: Alternative route for vehicular traffic ಶಿವಮೊಗ್ಗ - ಭದ್ರಾವತಿ ರೈಲು ಮಾರ್ಗ ಪರೀಶೀಲನೆ : ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ Previous post shimoga railway news | ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ : ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ