bengaluru news | ಹೆಚ್ ವೈ ಮೇಟಿ ನಿಷ್ಠಾವಂತ ರಾಜಕಾರಣಿ – ಸಿಎಂ ಸಿದ್ದರಾಮಯ್ಯ
ಬೆಂಗಳೂರು (bangalore), ನವೆಂಬರ್ 4: ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು.
ಜನಪರ ಕಾಳಜಿಯ ಸೇವೆ : ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು.
1989 ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ಹೇಳಿದ್ದಾರೆ.
ನಾಳೆ ಅಂತ್ಯಕ್ರಿಯೆ : ಜನರೊಂದಿಗೆ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದು ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ , ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ತೆರಳಲಾಗುವುದು. ನಾಳೆ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವೂ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
Bengaluru, November 4: Chief Minister Siddaramaiah said that Meti, a loyal politician, was very close to him. He spoke to the media in Bengaluru today. Former minister, senior leader and sitting MLA H.Y. Mate passed away today at 12.30 pm. I met him three days ago and inquired about his health, and the doctor also said that his health was improving. But he said he did not think that Matee would leave this world so soon.
