shimoga | job news | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು – ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ (shivamogga), ನವೆಂಬರ್ 14: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62 ಸಹಾಯಕಿಯರು, ಶಿಕಾರಿಪುರದಲ್ಲಿ 1 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರು, ಶಿವಮೊಗ್ಗದಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರು, ಸೊರಬದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 42 ಸಹಾಯಕಿಯರು ತೀರ್ಥಹಳ್ಳಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು ಮತ್ತು 69 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಸಂಬAಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
shivamogga : Online applications are invited from eligible female and female gender minority local candidates to fill the vacant posts of Anganwadi workers and helpers on honorarium basis under the jurisdiction of 07 Child Development Schemes in the district.
