ಶಿವಮೊಗ್ಗ (shivamogga), ನವೆಂಬರ್ 17: ಮೆಕ್ಕೆಜೋಳಕ್ಕೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಗೊಳಿಸಬೇಕು. ಹಾಗೆಯೇ ತತ್’ಕ್ಷಣವೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ, ನವೆಂಬರ್ 17 ರಂದು ತ್ಯಾಜವಳ್ಳಿ ರೈತರು ಶಿವಮೊಗ್ಗದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಬಿಂದು ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ರೈತರು ಮನವಿ ಪತ್ರ ಅರ್ಪಿಸಿದರು.
ಪ್ರಸ್ತುತ ವರ್ಷ ಉತ್ತಮ ಮಳೆಯಾದ ಕಾರಣದಿಂದ ತ್ಯಾಜವಳ್ಳಿ ಸೇರಿದಂತೆ ಶಿವಮೊಗ್ಗ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಆದರೆ ಮೆಕ್ಕೆಜೋಳಕ್ಕೆ ಮಾರುಕಟ್ಟೆಯಲ್ಲಿ ಬೆಲೆ ಅತ್ಯಂತ ಕಡಿಮೆಯಿದ್ದು, ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗುತ್ತಿದೆ.
ಮತ್ತೊಂದೆಡೆ, ರಾಜ್ಯ ಸರ್ಕಾರ ಇಲ್ಲಿಯವರೆಗೂ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಆರಂಭಿಸಿಲ್ಲ. ಇದರಿಂದ ಕಡಿಮೆ ಬೆಲೆಗೆ ರೈತರು ಬೆಳೆ ಮಾರಾಟ ಮಾಡುವಂತಾಗಿದೆ ಎಂದು ಮುಖಂಡ ಬಿಂದು ಕುಮಾರ್ ತಿಳಿಸಿದ್ದಾರೆ.
ಈ ಕಾರಣದಿಂದ ಮೆಕ್ಕೆಜೋಳಕ್ಕೆ ವೈಜ್ಞಾನಿಕ ಬೆಲೆ ನಿಗದಿಗೊಳಿಸುವುದರ ಜೊತೆಗೆ, ತಕ್ಷಣವೇ ಬೆಂಬಲ ಬೆಲೆಯಡಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. ಮನವಿ ಅರ್ಪಿಸುವ ವೇಳೆ ತ್ಯಾಜವಳ್ಳಿ ಗ್ರಾಮದ ರೈತರು ಉಪಸ್ಥಿತರಿದ್ದರು.
Shivamogga, November 17: On November 17, farmers from Thyajavalli protested in front of the DC office in Shivamogga, demanding that a scientific support price be fixed for maize and that a procurement center be set up immediately.

