shimoga | ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!

Dowry harassment of wife: Husband sentenced to prison

ಶಿವಮೊಗ್ಗ (shivamogga), ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಯಿಸಲು ಯತ್ನಿಸಿದ ಪತಿಯೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೂವಳ್ಳಿ ಗ್ರಾಮದ ನಿವಾಸಿ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಶಿಕ್ಷೆಯ ಜೊತೆಗೆ 15 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 2 ವರ್ಷ ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲಾರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತರವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ಪತ್ನಿಯು ಕೆಲಸಕ್ಕೆ ಹೋಗಿಲ್ಲವೆಂದು ಆಕ್ರೋಶಗೊಂಡ ಅಪರಾಧಿ ಆಲ್ಬರ್ಟ್ ನು, ಪತ್ನಿಯೊಂದಿಗೆ ಜಗಳ ಮಾಡಿದ್ದ. ನಂತರ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸಾಯಿಸಲು ಯತ್ನಿಸಿದ್ದ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ 105/2024 U/s 85, 109, (1) BNS ಕಾಯ್ದೆ ರೀತ್ಯಾ ಪ್ರಕರಣ ದಾಖಲಾಗಿತ್ತು.

ಸಬ್ ಇನ್ಸ್’ಪೆಕ್ಟರ್ ಶಿವಾನಂದ ಧರಣ್ಯನವರ್ ರವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

Shivamogga, December 1: The 1st Additional District and Sessions Court of Shivamogga has sentenced a husband to 10 years in rigorous imprisonment for trying to kill his wife by pouring petrol on her and setting her on fire.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →