ಶಿವಮೊಗ್ಗ (shivamogga), ಡಿಸೆಂಬರ್ 09: ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿಸೆಂಬರ್ 11 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ 11 ಮತ್ತು 12 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Shivamogga, December 09: Power supply to Krishnarajendra Water Purification Plant will be suspended on December 11 as MESCOM is conducting emergency maintenance work in Mandli area of Shivamogga city. In this context, there will be a disruption in the daily drinking water supply in Shivamogga city on December 11 and 12, said the Assistant Executive Engineer of the Karnataka Urban Water Supply and Sewerage Board.

