The mysterious disappearance of a woman from Bhadravati! ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!

bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!

ಭದ್ರಾವತಿ (bhadravathi), ಡಿಸೆಂಬರ್ 23: ಆಲೆಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು, ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಭದ್ರಾವತಿಯ ಹಳೇನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಳೆಹೊನ್ನೂರು ರಸ್ತೆಯ ಅಮೀರ್ ಜಾನ್ ಕಾಲೋನಿಯಲ್ಲಿ ನಡೆದಿದೆ.

ಮೂಲತಃ ಅಸ್ಸಾಂ ರಾಜ್ಯದ ನಿವಾಸಿಯಾದ ಸಮೀರುನ್ನೀಸಾ ಕೋಂ ಅಹದ್ ಆಲಿ (28) ನಾಪತ್ತೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಸಮೀರುನ್ನೀಸಾ ಅವರು ಹೈದರ್ ಆಲಿ ಎಂಬುವರ ಮನೆಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಡಿಸೆಂಬರ್ 16 ರಂದು ಹೊರಗಡೆ ಹೋದವರು ನಾಪತ್ತೆಯಾಗಿದ್ದಾರೆ.

ಚಹರೆ : ಮಹಿಳೆಯು 4.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಎಡ ಮೊಣಕೈ ಹತ್ತಿರ ಗೋಲಿ ಗಾತ್ರದ ಗಂಟು ಇದೆ. ಉರ್ದು, ಹಿಂದಿ, ಅಸ್ಸಾಂ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.

ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

The mysterious disappearance of a woman took place in Amir Jan Colony on Holehonnur Road under the jurisdiction of Halenagar Police Station in Bhadravati.

Auto rickshaw prepaid counters at KSRTC and private bus stands in Shivamogga city: DC information ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ - ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ : ಡಿಸಿ ಮಾಹಿತಿ Previous post shimoga news | ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ – ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರೀ ಪೇಯ್ಡ್ ಕೌಂಟರ್ : DC ಮಾಹಿತಿ