ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.  

ಶಿವಮೊಗ್ಗ ವರದಿ : ತುಂಗಾ ನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ದೂದ್ಯನಾಯ್ಕ್, ಬಳಿಗಾರ್ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ನಿರ್ಜನ ಪ್ರದೇಶಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದೆ.

ಶಿವಮೊಗ್ಗ ವರದಿ : ತುಂಗಾ ನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ದೂದ್ಯನಾಯ್ಕ್, ಬಳಿಗಾರ್ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ನಿರ್ಜನ ಪ್ರದೇಶಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದೆ.

ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಪೂರ್ವಾಪರ ಪರಿಶೀಲಿಸಿದ್ದಾರೆ. 7 ಜನರ ವಿರುದ್ದ ಲಘು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭದ್ರಾವತಿ ವರದಿ: ಭದ್ರಾವತಿ ಹೊಸಮನೆ ಠಾಣೆ ಸಬ್ ಇನ್ಸ್’ಪೆಕ್ಟರ್ ನಿಂಗರಾಜ್ ಮತ್ತವರ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ

ಭದ್ರಾವತಿ ವರದಿ: ಭದ್ರಾವತಿ ಹೊಸಮನೆ ಠಾಣೆ ಸಬ್ ಇನ್ಸ್’ಪೆಕ್ಟರ್ ನಿಂಗರಾಜ್ ಮತ್ತವರ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದಿದೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲನೆ ನಡೆಸಿ, 12 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದಿದೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲನೆ ನಡೆಸಿ, 12 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *