ಶಿವಮೊಗ್ಗ (shivamogga), ಡಿಸೆಂಬರ್ 31: ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಡಿಸೆಂಬರ್ 31 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗುರುದತ್ತ ಹೆಗಡೆ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ, ಪ್ರಸ್ತುತ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ, 2013 ರ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಮೀಷನರ್ ಆಗಿ ಬಡ್ತಿ ನೀಡಿ ವರ್ಗಾಯಿಸಲಾಗಿದೆ. ಫೆಬ್ರವರಿ 1, 2024 ರಂದು ಅವರು ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದರು.
SP ವರ್ಗಾವಣೆ : ಎಸ್ಪಿ ಜಿ ಕೆ ಮಿಥುನ್ ಕುಮಾರ್ ಅವರನ್ನು ಬೆಂಗಳೂರು (bengaluru) ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬಿ ನಿಖಿಲ್ ಅವರನ್ನು ನಿಯೋಜಿಸಲಾಗಿದೆ.
ಬಿ ನಿಖಿಲ್ ಅವರು ಕೋಲಾರ ಜಿಲ್ಲೆ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. 2017 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಜಿ ಕೆ ಮಿಥುನ್ ಕುಮಾರ್ ಅವರು ಅಕ್ಟೋಬರ್ 5 ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಸುದೀರ್ಘ ಅವಧಿಯವರೆಗೆ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.
Shivamogga, December 31: The state government has issued orders transferring Shivamogga DC Gurudatta Hegde and SP GK Mithun Kumar.

