shimoga | bhadra dam | 120 ದಿನಗಳ ಕಾಲ ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು : ಮಹತ್ವದ ನಿರ್ಧಾರ!

Water from Bhadra Reservoir to Tungabhadra River: Public advised to be cautious! ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು : ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ!

ಶಿವಮೊಗ್ಗ (shivamogga), ಜನವರಿ 02 : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03 ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08 ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120 ದಿನಗಳ ಕಾಲ ನೀರನ್ನು ಹರಿಸಲು ನಿರ್ಧರಿಸಲಾಗಿದೆ.

ಜನವರಿ 2 ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರದ ಹೊರವಲಯ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ, ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26 ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ.

ಆದ್ದರಿಂದ ಪ್ರಾಧಿಕಾರದ ನೀರಾವರಿ ಇಂಜಿನಿಯರ್‌ರವರು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್‌ ಅವರು ಮಾತನಾಡಿ, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಸಮೀಪದ ಸಾಗುವಳಿದಾರರಿಗೆ ನೀರು ದೊರೆಯುತ್ತಿರುವಂತೆಯೇ ದೂರದ ರೈತರ ಒಣಭೂಮಿಗೆ ನೀರು ಹರಿಸಬೇಕಾಗಿರುವುದು ಪ್ರಾಧಿಕಾರದ ಹೊಣೆಯಾಗಿದೆ.

ನೈಸರ್ಗಿಕವಾಗಿ ದೊರೆಯುತ್ತಿರುವ ಅಮೂಲ್ಯ ಜಲವನ್ನು ಮಿತವಾಗಿ ಬಳಸಿಕೊಳ್ಳಬೇಕು. ಮಾನವೀಯ ನೆಲೆಯಲ್ಲಿ ಎಲ್ಲ ರೈತರ ಹಿತಸುಖ ಕಾಯುವ ನಿಟ್ಟಿನಲ್ಲಿ ಚಿಂತಿಸಬೇಕು. ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ವ್ಯರ್ಥವಾಗಿ ಹರಿದು ಹೋಗುವಂತಾಗಬಾರದು. ನೀರಿನ ಮಿತಬಳಕೆ ಬಗ್ಗೆ ಎಲ್ಲರಲ್ಲೂ ಜಾಗೃತಿ ಇರಬೇಕು. ಪ್ರಾಧಿಕಾರದ ನಿರ್ಣಯಗಳಿಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಆರ್.ಪ್ರಸನ್ನಕುಮಾರ್‌, ಅಭಿಯಂತರರಾದ ರವಿಕುಮಾರ್‌, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.

ಜಲಾಶಯದ ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿನ ಸಾಗುವಳಿದಾರರಿಗೆ ಹಾಗೂ ಹೊಸದಾಗಿ ತೋಟ ಮಾಡಿರುವ ಬೆಳೆಗಾರರಿಗೆ ಇಂದಿನಿಂದಲೇ ನೀರಿನ ಅಗತ್ಯವಿದೆ. ವಿಳಂಬವಾದಲ್ಲಿ ಲಕ್ಷಾಂತರ ಅಡಿಕೆ ಗಿಡಗಳು ನಾಶವಾಗುವ ಸಂಭವವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೀರಿನ ಹರಿವನ್ನು ನಿಯಂತ್ರಿಸಿ, ನೀರನ್ನು ಒದಗಿಸಬಹುದಾದ ಸಾಧ್ಯತೆಗಳ ಬಗ್ಗೆ ಪರಿಶೀಲಿಸಬೇಕು ಎಂದು ರೈತ ಮುಖಂಡ ಹೆಚ್ ಆರ್ ಬಸವರಾಜಪ್ಪ ತಿಳಿಸಿದ್ದಾರೆ.

ಗೋಂದಿ ಭಾಗದ ಕಾಲುವೆಗಳು ಎತ್ತರದ ಪ್ರದೇಶದಲ್ಲಿವೆ ಅಲ್ಲದೆ ಆ ಭಾಗದ ಕೆರೆ-ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರಿನ ಹರಿವು ಸಮರ್ಪಕವಾಗಿಲ್ಲದ ಕಾರಣ ಅಚ್ಚುಕಟ್ಟುದಾರರಿಗೆ ನೀರು ತಲುಪದಿರುವ ಬಗ್ಗೆ ಆಕ್ಷೇಪಣೆಗಳಿರುವುದನ್ನು ಗಮನಿಸಲಾಗಿದೆ. ಅಲ್ಲಿನ ಬೆಳೆಗಾರರಿಗೆ  ಅಗತ್ಯವಿರುವಷ್ಟು ಪ್ರಮಾಣದ ನೀರನ್ನು ಸಕಾಲದಲ್ಲಿ ಒದಗಿಸಲು ಭದ್ರಾ ಇಂಜಿನಿಯರ್‌ರವರು ಪರಿಶೀಲಿಸಿ ಕ್ರಮ ವಹಿಸಬೇಕು ಎಂದರು.

ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ನಾಲೆಗಳ ದುರಸ್ತಿಗೆ ಈಗಾಗಲೇ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದೆ. ಇನ್ನಷ್ಟು ಅನುದಾನದ ಅಗತ್ಯವಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹಲವು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಹಾಗೂ ಪ್ರಸ್ತುತ ಶಿಥಿಲಾವಸ್ತೆಯಲ್ಲಿರುವ ನಾಲೆ, ದಂಡೆಗಳ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿ ಆರಂಭಿಸಿರುವುದು ರೈತರಲ್ಲಿ ಸಂತಸ ತಂದಿದೆ. ಅದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸುವುದಾಗಿ ರೈತ ಎ.ಬಿ.ಕರಿಬಸಪ್ಪ ಅವರು ತಿಳಿಸಿದ್ದಾರೆ.

Shivamogga, January 02: It has been decided to release water from the Bhadra reservoir to the left bank canal from January 03 and to the right bank canal from January 08 continuously for 120 days. This decision was taken at a meeting organized at the Bhadra Achukattu Authority office hall in Malavagoppa, on the outskirts of Shivamogga city, regarding the provision of water for the summer crop of 2025-26 in the Achukattu area of ​​the Bhadra project.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

One Comment on “shimoga | bhadra dam | 120 ದಿನಗಳ ಕಾಲ ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು : ಮಹತ್ವದ ನಿರ್ಧಾರ!”

Comments are closed.