shimoga news | ಶಿವಮೊಗ್ಗ : ಹಾಸ್ಟೆಲ್ ಕೊಠಡಿಯಲ್ಲಿಯೇ ಆ*ತ್ಮಹ*ತ್ಯೆಗೆ ಶರಣಾದ ಮೆಡಿಕಲ್ ಕಾಲೇಜ್ ವಿದ್ಯಾರ್ಥಿ!

Shimoga City : Young man’s body found hanging from a roadside tree ಶಿವಮೊಗ್ಗ ನಗರದ ರಸ್ತೆ ಬದಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

ಶಿವಮೊಗ್ಗ (shivamogga), ಜನವರಿ 7: ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆಗೆ ಶರಣಾದ ಘಟನೆ, ಜನವರಿ 7 ರಂದು ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ (ಸಿಮ್ಸ್) ಹಾಸ್ಟೆಲ್ ಕೊಠಡಿಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ಮೂಲದ ಸಂದೀಪ್ ರಾಜ್ (28) ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇವರು ಮೆಡಿಕಲ್ ಕಾಲೇಜ್ ನಲ್ಲಿ ಎಂಡಿ ರೇಡಿಯಾಲಜಿ ಅಭ್ಯಾಸ ಮಾಡುತ್ತಿದ್ದರು.

ಕಾಲೇಜ್ ನ ಭದ್ರಾ ವಸತಿ ಗೃಹದ 3 ನೇ ಮಹಡಿ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ವೊಂದನ್ನು ಬರೆದಿಟ್ಟಿದ್ದಾರೆ. ಸಂಜೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಸಂದೀಪ್ ರಾಜ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಮಾನಸಿಕ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು ಎನ್ನಲಾಗಿದೆ. ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Shivamogga, January 7: A medical student committed suicide by hanging himself in his hostel room at the Government Medical College (SMC) in Shivamogga on January 7.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →