Special trains to run between Yeshwantpur and Talaguppa on the occasion of Sankranti festival ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ - ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

shimoga train news | ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

ಶಿವಮೊಗ್ಗ(shivamogga), ಜನವರಿ 07: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06585 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್’ಪ್ರೆಸ್ ರೈಲು ದಿನಾಂಕ 13.01.2026 ರಂದು (ಮಂಗಳವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ.

ಇದರ ಜೋಡಿ ರೈಲು, ರೈಲು ಸಂಖ್ಯೆ 06586 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ದಿನಾಂಕ 14.01.2026 ರಂದು (ಬುಧವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅಂದೇ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು ಥಮ ದರ್ಜೆ ಎಸಿ (1), ಎಸಿ ಟು ಟೈರ್ (2), ಎಸಿ ತ್ರೀ-ಟೈರ್ (6), ಸ್ಲೀಪರ್ ಕ್ಲಾಸ್ (8), ಜನರಲ್ ಸೆಕೆಂಡ್ ಕ್ಲಾಸ್ (3) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 22 ಬೋಗಿಗಳನ್ನು ಒಳಗೊಂಡಿರುತ್ತದೆ.

ಅದೇ ರೀತಿ, ರೈಲು ಸಂಖ್ಯೆ 06587 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್’ಪ್ರೆಸ್ ರೈಲು ದಿನಾಂಕ 23.01.2026 ರಂದು (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ.

ಇದರ ಜೋಡಿ ರೈಲು, ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ  ವಿಶೇಷ ಎಕ್ಸ್’ಪ್ರೆಸ್ ದಿನಾಂಕ ರೈಲು 24.01.2026 ರಂದು (ಶನಿವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15 ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಸಂಚರಿಸುವಾಗ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ.

ಈ ವಿಶೇಷ ರೈಲು ಪ್ರಥಮ ದರ್ಜೆ ಕಮ್ ಎಸಿ ಟು ಟೈರ್ (1), ಎಸಿ ತ್ರೀ-ಟೈರ್ (2), ಸ್ಲೀಪರ್ ಕ್ಲಾಸ್ (10), ಜನರಲ್ ಸೆಕೆಂಡ್ ಕ್ಲಾಸ್ (5) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಲಾಭವನ್ನು ಪಡೆದುಕೊಳ್ಳಲು ಹಾಗೂ ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.

Shimoga, January 07: To regulate passenger crowding and ensure smooth travel during the Sankranti festival, South Western Railway has decided to run two special express trains between Yeshwantpur and Talaguppa stations.

What did the student do in the Shimoga Government Medical College hostel room? ಶಿವಮೊಗ್ಗ : ಹಾಸ್ಟೆಲ್ ಕೊಠಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ಕಾಲೇಜ್ ವಿದ್ಯಾರ್ಥಿ! Previous post shimoga news | ಶಿವಮೊಗ್ಗ : ಹಾಸ್ಟೆಲ್ ಕೊಠಡಿಯಲ್ಲಿಯೇ ಆ*ತ್ಮಹ*ತ್ಯೆಗೆ ಶರಣಾದ ಮೆಡಿಕಲ್ ಕಾಲೇಜ್ ವಿದ್ಯಾರ್ಥಿ!
Shimoga: Head Constable commits suicide inside the police station ಶಿವಮೊಗ್ಗ : ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್’ಟೇಬಲ್! Next post shimoga news | ಶಿವಮೊಗ್ಗ : ಪೊಲೀಸ್ ಠಾಣೆಯಲ್ಲಿಯೇ ಆ*ತ್ಮಹ*ತ್ಯೆಗೆ ಶರಣಾದ ಹೆಡ್ ಕಾನ್ಸ್’ಟೇಬಲ್!