news update | ದ್ವೇಷ ಭಾಷಣ ಮಸೂದೆ : ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ – ಸಿಎಂ ಸಿದ್ದರಾಮಯ್ಯ

Hate Speech Bill: Not rejected by Governor – CM Siddaramaiah ದ್ವೇಷ ಭಾಷಣ ಮಸೂದೆ : ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ – ಸಿಎಂ ಸಿದ್ದರಾಮಯ್ಯ

ಮಂಗಳೂರು (mangalore), ಜನವರಿ 11: ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಾವು ಹಿಂದೆ ಪಾದಯಾತ್ರೆ ಮಾಡಿದ್ದು ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ. ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು  ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಇವರು ಪಾದಯಾತ್ರೆ ಏಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಪ್ರಚೋದನೆ ಆಯಿತು. ಜನಾರ್ದನ ರೆಡ್ಡಿ , ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರಿಂದ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಕುರ್ಚಿ ಬಗ್ಗೆ ಕಾಳಗವೇ ಇಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

Mangaluru, January 11: The hate speech bill has been unanimously passed, and the Governor has neither returned it, rejected it, nor given assent. Chief Minister Siddaramaiah stated that an explanation will be provided when he is called upon regarding this matter.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →