ನರೇಂದ್ರ ಮೋದಿ, ಅಮಿತ್ ಶಾ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದರು. ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ವಿರುದ್ದ ವಾಗ್ದಾಳಿ ನಡೆಸಿದರು. ‘ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ, ಉಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಕಾರ್ಯಕ್ರಮ ಜಾರಿಗೆ ತಂದು ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕು ನೀಡಲಾಯಿತು. ಇದೇನು ಮೋದಿ, ಅಮಿತ್ ಶಾ ಜಾರಿಗೆ ತಂದಿದ್ದರಾ? ಇವರು ಒಂದಿಂಚು ಭೂಮಿಯನ್ನುಕೂಡ ಯಾರಿಗೂ ಕೊಟ್ಟಿಲ್ಲ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿವಮೊಗ್ಗ, ಏ. 30: ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದರು. ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ದ ವಾಗ್ದಾಳಿ ನಡೆಸಿದರು.

‘ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ, ಉಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಕಾರ್ಯಕ್ರಮ ಜಾರಿಗೆ ತಂದು ಲಕ್ಷಾಂತರ ಜನರಿಗೆ ಭೂ ಒಡೆತನದ ಹಕ್ಕು ನೀಡಲಾಯಿತು. ಇದೇನು ಮೋದಿ, ಅಮಿತ್ ಶಾ ಜಾರಿಗೆ ತಂದಿದ್ದರಾ? ಇವರು ಒಂದಿಂಚು ಭೂಮಿಯನ್ನುಕೂಡ ಯಾರಿಗೂ ಕೊಟ್ಟಿಲ್ಲ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇವರು ಬರೀ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ದಂಗೆಗಳು ಏಳುತ್ತವೆ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರಚೋದನಕಾರಿಯಾಗಿ ಮಾತನಾಡಿ ಬಡವರ ನಡುವೆಯೇ ಜಗಳ ಹಚ್ಚುವ ಕಾರ್ಯ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಕೆಲಸಗಳನ್ನೇ, ಹೊಸದಾಗಿ ಸುಣ್ಣ ಬಳಿದು ಉದ್ಘಾಟಿಸುವ ಕಾರ್ಯವನ್ನು ನರೇಂದ್ರ ಮೋದಿಯವರು ನಡೆಸುತ್ತಿದ್ದಾರೆ. ಇದೊಂದು ಸುಳ್ಳು ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರವು ಶೇ.40 ರಷ್ಟು ಕಮೀಷನ್ ಸರ್ಕಾರವಾಗಿದೆ. ಇದನ್ನು ಗುತ್ತಿಗೆದಾರರೇ ಬಹಿರಂಗಪಡಿಸಿದ್ದಾರೆ. ಈ ಕಾರಣದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುಣಮಟ್ಟದ ಕೆಲಸಗಳೇ ಆಗಿಲ್ಲ. ಲಂಚವಿಲ್ಲದೆ ಯಾವುದೇ ಕಾರ್ಯಗಳು ನಡೆಯಲಿಲ್ಲ ಎಂದು ಆರೋಪಗಳ ಸುರಿಮಳೆಗೈದರು.  

ಸಮಾರಂಭದಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *