ಶಿವಮೊಗ್ಗ (shivamogga), ಫೆಬ್ರವರಿ 18: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 21 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಕುರಿತಂತೆ ಉದ್ಯೋಗ ವಿನಿಮಯ ಕಚೇರಿ ಫೆ. 18 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2 ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9901914601 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Shivamogga : Job Fair on February 21
Shivamogga, February 18: A job fair has been organized by the Shivamogga District Employment Exchange Office on February 21 at 11 AM in the District Employment Exchange Office.
In the press release issued by the Employment Exchange Office on Feb. 18, it was informed that reputed private companies will participate in the job fair and candidates will be selected through direct interviews.
Candidates aged between 18 and 35 years who have passed SSLC, PUC, ITI, Diploma, and other degrees can attend the interview with their biodata and a copy of Aadhaar card. Entry will be free.
For more information, candidates may personally contact or reach out to the District Employment Exchange Office, Gutyappa Colony, 2nd Cross, Pampanagar, Sagar Road, Shivamogga, or call mobile number 9901914601, the officials stated in the release.

