ಶಿವಮೊಗ್ಗ, ಫೆಬ್ರವರಿ 19: ಪ್ರಯಾಣಿಕರ ಅನುಕೂಲಕ್ಕಾಗಿ, ರೈಲು ಸಂಖ್ಯೆ 16227/16228 ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲಿನ ಅರಸಾಳು ನಿಲ್ದಾಣದ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ-ಮೈಸೂರು-ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಅರಸಾಳು ಮತ್ತು ಕುಂಸಿ ನಿಲ್ದಾಣಗಳ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.
ಈ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆಯು 2026ರ ಫೆಬ್ರವರಿ 24ರಿಂದ ಆಗಸ್ಟ್ 23ರವರೆಗೆ ಮುಂದುವರಿಯಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ ಎಂದು ರೈಲ್ವೆ ಇಲಾಖೆ ಫೆಬ್ರವರಿ 19 ರಂದು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
Stoppage at Arasalu and Kumsi Extended for Six Months
Shivamogga : For the convenience of passengers, Temporary stoppage of Train Nos. 16227/16228 Mysuru–Talguppa–Mysuru Daily Express at Arasalu and Train Nos. 16205/16206 Talguppa–Mysuru–Talguppa Daily Express at Arasalu and Kumsi has been extended for a further period of six months. The extension will be effective from 24 February 2026 to 23 August 2026. The trains will continue to halt at the above stations with existing timings.

