ಶಿವಮೊಗ್ಗ (shivamogga), ಫೆಬ್ರವರಿ 21: ಶಿವಮೊಗ್ಗ ಕೋಟೆ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ 28 ರವರೆಗೆ ಜರುಗಲಿದೆ. ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿವೆ. ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗಲಿದೆ.
ಈ ಕಾರಣದಿಂದ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಹೊಳಬಸ್ ಸ್ಟಾಪ್, ಶಂಕರಮಠ ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ರಸ್ತೆ, ಎಸ್.ಪಿ.ಎಂ.ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ಸರ್ಕಲ್ ಹಾಗೂ ಸುತ್ತಮುತ್ತ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶ ಹೊರಡಿಸಿದ್ದಾರೆ.
ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು. ಫೆ. 24 ರಿಂದ 28ರವರೆಗೆ ಹೊಳಬಸ್ ಸ್ಟಾಪ್‌ನಿಂದ – ಬೆಕ್ಕಿನ ಕಲ್ಮಠ-ರಾಮಣ್ಣ ಶ್ರೇಷ್ಠಿ ಪಾರ್ಕ್ವರೆಗೆ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ ಮಾಡುವುದು. ಫೆ. 24 ರಂದು ಬೆಳಗ್ಗೆ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಗಾಂಧಿ ಬಜಾರ್-ಶಿವಪ್ಪನಾಯಕ ಸರ್ಕಲ್‌ವರೆಗೆ ಮತ್ತು ಶಿವಪ್ಪ ನಾಯಕ ಸರ್ಕಲ್ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
ಮಾರ್ಗ ಬದಲಾವಣೆ : ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ಎಂಆರ್‌ಎಸ್ ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಚಿತ್ರದುರ್ಗ-ಹೊಳೆಹೊನ್ನೂರು ಕಡೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್‌ಗಳು ವಿದ್ಯಾನಗರ-ಎಂ.ಆರ್.ಎಸ್. ಸರ್ಕಲ್ ಬೈಪಾಸ್ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು. ಹೊನ್ನಾಳಿ-ಹೊಳಲೂರು ಕಡೆಯಿಂದ ಬರುವ ಭಾರಿ ವಾಹನಗಳು, ಸರಕು ಸಾಗಣೆ ವಾಹನಗಳು ಮತ್ತು ಬಸ್‌ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್- ಕೆಇಬಿ ಸರ್ಕಲ್- ರೈಲ್ವೆ ಸ್ಟೇಷನ್-ಉಷಾ ನರ್ಸಿಂಗ್ ಹೋಂ ಸರ್ಕಲ್- 100 ಅಡಿ ರಸ್ತೆ ಮೂಲಕ ಶಿವಮೊಗ್ಗ ನಗರ ಪ್ರವೇಶ ಮಾಡುವುದು.
ಶಿಕಾರಿಪುರ ಸವಳಂಗದಿಂದ ಬರುವ ಎಲ್ಲಾ ಭಾರಿ ವಾಹನ, ಎಲ್ಲಾ ಬಸ್‌ಗಳನ್ನು ಉಷಾ ನರ್ಸಿಂಗ್ ಹೋಂ, ಲಕ್ಷ್ಮೀ ಟಾಕೀಸ್, ಪೊಲೀಸ್ ಚೌಕಿ, ಆಲ್ಕೋಳ ಮುಖಾಂತರ ಸಾಗರ ರಸ್ತೆಯಲ್ಲಿ ಹೋಗುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಸಂದೇಶ್ ಮೋಟಾರ್ಸ್-ಬೈಪಾಸ್ ರಸ್ತೆ ಮೂಲಕ ಸಂಚರಿಸುವುದು. ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆಗೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ಉಷಾ ನರ್ಸಿಂಗ್ ಹೋಂ, ಸವಳಂಗ ರಸ್ತೆ ಮೂಲಕ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತೀಗಣ್ಯ ವ್ಯಕ್ತಿಗಳ ವಾಹನಗಳು, ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ಸೂಚಿಸಲಾಗಿದೆ.
Shivamogga Marikamba Devi Jatre: Changes in Traffic and Parking Routes
Shivamogga, February 21: The Shivamogga Fort Marikamba Devi Jatre Mahotsava will be held from February 24 to 28. During this time, there will be Rajabeedi Utsav, cultural programs, puja/offerings/prasada distribution, state-level open wrestling competitions, and other events. Thousands of devotees are expected to arrive by car, two-wheelers, buses, and other vehicles, leading to heavy traffic congestion.
To ensure smooth movement, the District Commissioner Prabhuling Kavalikatti has issued temporary traffic and parking changes:
- Traffic Ban Zones:
- Within 500 meters around Marikamba Temple, all vehicle movement is prohibited.
- From Feb 24–28, vehicle movement and parking are banned from Holabus Stop – Bekkin Kalmath – Ramanna Shreshti Park.
- On Feb 24, from 3 AM to 11 PM, vehicle movement and parking are banned from Ramanna Shreshti Park – Gandhi Bazaar – Shivappa Nayaka Circle, and within 500 meters around Shivappa Nayaka Circle.
- Diversion Routes for Heavy Vehicles and Buses:
- From Bengaluru–Bhadravati–N.R. Pura side → enter Shivamogga via MRS Circle Bypass.
- From Chitradurga–Holehonnu side → enter via Vidyanagar–MRS Circle Bypass.
- From Honnali–Holalur side → enter via Sangolli Rayanna Circle – KEB Circle – Railway Station – Usha Nursing Home Circle – 100 Feet Road.
- From Shikaripura–Savalanaga side → all heavy vehicles and buses must go via Usha Nursing Home – Lakshmi Talkies – Police Chowki – Alkol – Sagar Road.
- From Bus Stand (Govt & Pvt) towards Bengaluru, Bhadravati → vehicles must use Sandesh Motors – Bypass Road.
- From Bus Stand towards Honnali, Shikaripura, Sorab, Harihara, Davanagere → buses and heavy goods vehicles must go via Sagar Road – Helipad Circle – Alkol Circle – Police Chowki – Usha Nursing Home – Savalanaga Road.
- Exemptions: Police vehicles, VIP vehicles, ambulances, and vehicles providing essential services are allowed to move as needed.

