ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ

ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು. ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು.

ಶಿಕಾರಿಪುರ, ಮೇ 2: ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು.

ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು.

ಮೀಸಲಾತಿ ಕುರಿತಂತೆ ಅಪಪ್ರಚಾರ ಮಾಡಲಾಗುತ್ತಿದೆ. ಯುವಕರಿಗೆ ತಪ್ಪು ತಿಳಿವಳಿಕೆ ಮೂಡಿಸುವ ಕಾರ್ಯ ನಡೆಸಲಾಗಿದೆ. ಸರ್ಕಾರ ಯಾರಿಗೂ ಅನ್ಯಾಯ ಮಾಡಿಲ್ಲ ಎಂಬುವುದನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →