ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ!

ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಶಿವಮೊಗ್ಗ, ಮೇ 3: ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ: ಶಿಕ್ಷೆಗೊಳಗಾದ ಯುವಕನು, 2019 ರಲ್ಲಿ 14 ವರ್ಷ ವಯೋಮಾನದ ಬಾಲಕಿಯ ಅಶ್ಲೀಲ ಫೋಟೋಗಳನ್ನು ಮೊಬೈಲ್ ಪೋನ್ ಮೂಲಕ ತೆಗೆದು ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತಂತೆ ನೊಂದ ಬಾಲಕಿಯ ತಾಯಿಯು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅಂದು ಮಹಿಳಾ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಆಗಿದ್ದ ಅಭಯಪ್ರಕಾಶ್ ಸೋಮನಾಳ್ ಹಾಗೂ ಮಹಿಳಾ ಸಿಬ್ಬಂದಿ ಸರೋಜರವರು ಪ್ರಕರಣದ ತನಿಖೆ ನಡೆಸಿದ್ದರು. ಆರೋಪಿತ ಯುವಕನನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →