ಶಿವಮೊಗ್ಗ (shivamogga), ಮಾರ್ಚ್ 06: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಅಂತಹ ಪಂಚಾಯಿತಿಗಳಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು https://sevasindhuservices.karnataka.gov.in / ರ ಮೂಲಕ ಮಾ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Online Applications Invited for Karnataka One Centers
Shivamogga, March 06: To provide services of various government departments under one roof, Karnataka One franchise centers have been established in urban local bodies. Through these centers, citizens in urban areas are able to access multiple government services close to their homes.
In this regard, the state government is implementing new schemes through the Seva Sindhu portal. In Shivamogga district, certain Gram Panchayats have been upgraded from Grade-2 to Grade-1, and for such Panchayats, Grama One centers are to be established. Applications for these centers are invited online.
Interested candidates are requested to submit their applications by March 15 through the portal https://sevasindhuservices.karnataka.gov.in, as announced by the Deputy Commissioner of Shivamogga district.

