ಶಿವಮೊಗ್ಗ (shivamogga), ಮಾರ್ಚ್ 24 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ, ಮಹಾಂತ್ ಮೋಟಾರ್ಸ್ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Shivamogga : Job Fair on March 27 – Direct Interviews for Candidate Selection
Shivamogga, March 24: The District Employment Exchange Office will organize a job fair on March 27 at 11:00 AM at the District Employment Exchange Office in Shivamogga.
Companies such as Shahi Exports, Apollo Pharmacy, and Mahant Motors will participate in the fair. Candidates will be selected through direct interviews.
Applicants aged between 18 and 35 years who have completed SSLC, PUC, ITI, Diploma, or other degree courses can attend the interviews with their biodata and a copy of Aadhaar card. Entry is free.
For more information, candidates may contact the District Employment Exchange Office, Gutyappa Colony, 2nd Cross, Pampanagar, Sagar Road, Shivamogga, or call 9380663606 / 9108235132, as stated in the official announcement by employment officers.

