ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

-ಬಿ.ರೇಣುಕೇಶ್-

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಚುನಾವಣಾ ಕಣಕ್ಕಿಳಿದಿರುವ ಅಭ್ಯರ್ಥಿಗಳು, ಕಾರ್ಯಕರ್ತರು, ಬೆಂಬಲಿಗರು ಬಿರುಸಿನ ಪ್ರಚಾರ ಕಾರ್ಯದಲ್ಲಿ ತಲ್ಲೀನವಾಗಿದ್ದಾರೆ. ಮತದಾರರ ಮನವೊಲಿಕೆಗೆ ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಮನೆ ಮನೆಗೆ ತೆರಳಿ ಕರಪತ್ರ ವಿತರಣೆ ಮಾಡಲಾಗುತ್ತಿದೆ.

ಇದೆಲ್ಲದರ ನಡುವೆ ವಿವಿಧ ಪಕ್ಷಗಳ ಸ್ಟಾರ್ ಕ್ಯಾಂಪೇನರ್ ಗಳು ಸಮಾವೇಶ, ಸಭೆ, ರೋಡ್ ಶೋ ಪಾದಯಾತ್ರೆಗಳ ಮೂಲಕ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ.

ಇದರ ಜೊತೆಗೆ ಕೆಲ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ, ಆಟೋ ಮತ್ತೀತರ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ನಡೆಸುತ್ತಿರುವುದು ಕಂಡುಬರುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಅಬ್ಬರ: ಸಾಮಾಜಿಕ ಜಾಲತಾಣಗಳ ವೇದಿಕೆಯಲ್ಲಿ ಚುನಾವಣಾ ಪ್ರಚಾರದ ಅಬ್ಬರ ಮತ್ತಷ್ಟು ಜೋರಾಗಿದೆ. ಪಕ್ಷ, ಅಭ್ಯರ್ಥಿಗಳು, ತತ್ವ-ಸಿದ್ದಾಂತಗಳ ಪರವಾದ ಹಾಗೂ ಎದುರಾಳಿ ಪಕ್ಷ, ನಾಯಕರಿಗೆ ಸಂಬಂಧಿಸಿದಂತೆ ಟೀಕೆ-ಟಿಪ್ಪಣಿಗಳು ಸೇರಿದಂತೆ ನಾನಾ ರಾಜಕೀಯ ವಿಷಯಗಳ ಕುರಿತಾದ ಫೋಟೋ-ವೀಡಿಯೋಗಳು ಭಾರೀ ದೊಡ್ಡ ಸಂಖ್ಯೆಯಲ್ಲಿ ಹರಿದಾಡುತ್ತಿವೆ.

ಒಟ್ಟಾರೆ ಮತದಾರರ ಗಮನ ಸೆಳೆಯಲು ಚುನಾವಣಾ ಕಣದಲ್ಲಿ ಭಾರೀ ಹೈಡ್ರಾಮಾಗಳೇ ನಡೆಯುತ್ತಿವೆ. ಪ್ರಚಾರ ಕಣದಲ್ಲಿ ದಿನಕ್ಕೊಂದು ತಿರುವುಗಳು ಕಂಡುಬರುತ್ತಿವೆ. ಆದರೆ ಮತದಾರ ಪ್ರಭುವಿನ ಚಿತ್ತ ಯಾರತ್ತ ಎಂಬುವುದು ಸಂಪೂರ್ಣ ನಿಗೂಢವಾಗಿರುವುದಂತೂ ಸತ್ಯ!

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *