shimoga news | ಶಿವಮೊಗ್ಗ ನಗರದ ರಸ್ತೆ ಬದಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

Shimoga City : Young man’s body found hanging from a roadside tree ಶಿವಮೊಗ್ಗ ನಗರದ ರಸ್ತೆ ಬದಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

ಶಿವಮೊಗ್ಗ, ಏಪ್ರಿಲ್ 12: ರಸ್ತೆ ಬದಿಯ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ, ಶಿವಮೊಗ್ಗ ನಗರದಲ್ಲಿ ಏಪ್ರಿಲ್ 12 ರಂದು ನಡೆದಿದೆ.

ಪಾರ್ಕ್ ಬಡಾವಣೆ ಮುಖ್ಯ ರಸ್ತೆಯ ನವರಂಗ್ ಐಸ್ ಕ್ರಿಂ ಮುಂಭಾಗದ ರಸ್ತೆಯ ಸೆಂಟ್ರಲ್ ಬ್ಯಾಂಕ್ ಬಳಿ ಘಟನೆ ನಡೆದಿದೆ. ಮಧ್ಯಾಹ್ನ ಮರದಲ್ಲಿ ಶವ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಮೃತ ಯುವಕನ ಹೆಸರು ಸೇರಿದಂತೆ ಪೂರ್ವಾಪರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ. ಸ್ಥಳಕ್ಕಾಗಮಿಸಿದ ಜಯನಗರ ಠಾಣೆ ಪೊಲೀಸರು ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಮೇಲ್ನೋಟಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Shimoga City: Young man’s body found hanging from a roadside tree

Shimoga, April 12: A shocking incident occurred in Shimoga city on April 12, where the body of a young man was found hanging from a roadside tree.

The incident took place near the Central Bank in front of Navarang Ice Cream on the main road of Park Extension. Around noon, members of the public noticed the body and immediately informed the police.

The identity of the deceased and further background details are yet to be confirmed. Jayanagar Police Station officers arrived at the scene and sent the body to the government McGann Hospital mortuary.

At first glance, it appears to be a suspected suicide. More information is expected to emerge soon.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *