ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ

ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. 11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, ಮೇ 7: ರಾಜ್ಯದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. ಬೆಳಿಗ್ಗೆ11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.

2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಕಳೆದ ಹಲವು ದಿನಗಳ ಹಿಂದೆಯೇ ಮುಕ್ತಾಯವಾಗಿತ್ತು. ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಕೂಡುವಿಕೆಯ ಕಾರ್ಯ ನಡೆಸಲಾಗುತ್ತಿತ್ತು.

ಈ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ. ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ www.karresults.nic.in ಮತ್ತು https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *