ಶಿವಮೊಗ್ಗ (shivamogga), ಮೇ12 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಸದರಿ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಪ್ರೈ. ಲಿ.’ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಪಿಯುಸಿ, ಬಿಎ, ಬಿ.ಕಾಂ, ಬಿ.ಎಸ್ಸಿ ಮತ್ತು ಡಿಪ್ಲೊಮಾ ಪೂರೈಸಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ತರತಕ್ಕದ್ದು.
ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606, 9108235132 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಮೇ 12 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga: Recruitment for vacant posts through direct interview by a reputable company on May 16
Shivamogga, May 12: The District Employment Exchange Office has organized a direct interview for job seekers on May 16 at 10 am.
A private reputable company, ‘Strides Pharma Science Pvt. Ltd.’ will participate in the said interview and will select candidates for the vacant posts through direct interview.
Candidates between the ages of 18 to 35 who have completed PUC, BA, B.Com, B.Sc and Diploma can participate in the interview. Those who come for the interview should bring their biodata and Aadhaar card copies.
Admission to the direct interview is free and the interview will be held at the District Employment Exchange Office, Guthyappa Colony, Pampa Nagar 2nd Cross, Sagar Road, Shivamogga.
For more information, the employment authorities said in a statement released on May 12 that the candidates can contact mobile numbers 9380663606, 9108235132.

