ಮದುವೆ ಮನೆಯಲ್ಲಿ ಮತದಾನ ಜಾಗೃತಿ!

2023 ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು. ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು

ಶಿವಮೊಗ್ಗ, ಮೇ 8: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು.

ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್‌ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು.

ಇದೇ ಸಂದರ್ಭದಲ್ಲಿ ಸಮನ್ವಯ ಟ್ರಸ್ಟ್ ಪದಾಧಿಕಾರಿಗಳು ಮತದಾನ ಮಹತ್ವದ ಬಗ್ಗೆ ತಿಳಿಸಿದರು. ಮತದಾನದ ಗುರುತೀನ ಚೀಟಿ ಹೊಂದಿರುವ ಪ್ರತಿಯೊಬ್ಬರು ಬುಧವಾರ ಮೇ 10 ರಂದು ತಪ್ಪದೇ ಮತದಾನ ಮಾಡಬೇಕು.

ನನ್ನ ಮತ ಮಾರಾಟಕ್ಕಿಲ್ಲ ಎಂಬ ಘೋಷ ವಾಕ್ಯದ ಬಗ್ಗೆಯು ಜಾಗೃತಿ ಮೂಡಿಸಲಾಯಿತು. ಮತದಾನ ನಮ್ಮೆಲ್ಲರ ಹಕ್ಕು, ಮತ ಚಲಾಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮತದಾನ ಜಾಗೃತಿ ಮಾಡಲಾಯಿತು.

ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರಿಗೆ ಮತದಾನ ಮಾಡುವಂತೆ, ಮತದಾನ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ.

ಮತದಾನದ ದಿನ ಬೆಳಗ್ಗೆ ತಪ್ಪದೇ ಮತ ಚಲಾಯಿಸುವಂತೆ “ನಾವು ಮತ ಚಲಾಯಿಸೋಣ” ಅಭಿಯಾನ ನಡೆಸಲಾಯಿತು.

ಸಮನ್ವಯ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *