ಜೂನ್ 6 ರಂದು ಹಲವೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜೂನ್ 03 : ನಗರದ 110/11 ಕೆ.ವಿ. ವಿ.ವಿ.ಕೇಂದ್ರ, ಎಂ.ಆರ್.ಎಸ್. ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 06 ರ ಶನಿವಾರದಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ವಿವರ : ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಮ್.ಆರ್.ಎಸ್. ವಾಟರ್ ಸಪ್ಲೈ, ಎಮ್.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್. ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹಮದ್ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ.
ಸರ್.ಎಂ.ವಿ. ರಸ್ತೆ (ವೀರಭದ್ರೇಶ್ವರ ಚಿತ್ರ ಮಂದಿರದಿಂದ ಮಹಾವೀರ ವೃತ್ತದವರೆಗೆ), ಬಾಲರಾಜ್ ಅರಸ್ ರಸ್ತೆ (ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬಂಡ್ ರಸ್ತೆ,
ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರ ಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಬ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.
ಜೂನ್ 05 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ (shivamogga), ಜೂನ್ 03: ಶಿವಮೊಗ್ಗ ನಗರದ ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 05 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಅಲ್ಕೋಳ, ಎಸ್.ಎಲ್.ವಿ ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ,
ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ, ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

