ಶಿವಮೊಗ್ಗ (shivamogga), ಜೂನ್ 22: ಗಾಜನೂರು ಜಲಾಶದಯ ಮೂಲ ಸ್ಥಾವರದಲ್ಲಿ ಜೂನ್ 23 ರಂದು ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎರಡು ದಿನಗಳ ಕಾಲ ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಜೂನ್ 23 ಮತ್ತು 24 ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಈ ಕುರಿತಂತೆ ಜೂನ್ 22 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Two-Day Drinking Water Supply Disruption in Shivamogga
Shivamogga, June 22: Due to emergency maintenance work by MESCOM at the Gajanur reservoir’s main station on June 23, the daily drinking water supply to Shivamogga city will be disrupted for two days.
Officials from the Karnataka Water Supply and Sewerage Board’s Maintenance and Operations Sub-Division have announced that water supply will be affected on June 23 and 24.
In a press release issued on June 22, the Board requested the public to understand the situation and cooperate with the Karnataka Urban Water Supply and Sewerage Board during this period.

