Shimoga news | ಶಿವಮೊಗ್ಗ : ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ – ಸಾರ್ವಜನಿಕರಿಗೆ ಸಮಾಜ ಕಲ್ಯಾಣ ಇಲಾಖೆ ಎಚ್ಚರಿಕೆ!

shimoga crime news / police news
ಶಿವಮೊಗ್ಗ (shivamogga), ಜೂನ್ 29: ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶಿವಕುಮಾರ ಸ್ವಾಮಿ ಬಡಾವಣೆಯ ನಿವಾಸಿಯೋರ್ವ, ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ನಕಲಿ ಪತ್ರವನ್ನು ಸೃಷ್ಟಿಸಿದ್ದಾನೆ. ಅದರಲ್ಲಿ ‘ದೇವರಾಜ ಅರಸು ಸಾಲ ಮಂಜೂರಾತಿ’ ಎಂಬ ಪದವನ್ನು ಮುದ್ರಿಸಿ, ಸುಮಾರು 150 ಕ್ಕಿಂತಲೂ ಹೆಚ್ಚು ಕೂಲಿ ಕಾರ್ಮಿಕರಿಂದ ಹಣವನ್ನು ಪಡೆದು ವಂಚಿಸಿರುವುದು ತಿಳಿದುಬಂದಿದೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಹೆಸರನ್ನು ಬಳಸಿಕೊಂಡು ಸಾಲ ಮಂಜೂರು ಮಾಡಿಸಿಕೊಡುವುದಾಗಿ ಅಥವಾ ಸಾಲ ಮಂಜೂರು ಮಾಡಿಸಲು ಹಣದ ಆಮಿಷ ಒಡ್ಡಿ ಈ ವ್ಯಕ್ತಿ ವಂಚನೆಗೆ ಯತ್ನಿಸುತ್ತಿದ್ದಾನೆ. ಆದ್ದರಿಂದ ಸಾರ್ವಜನಿಕರು ಯಾರೂ ಕೂಡ ಈತನಿಗೆ ಹಣವನ್ನು ನೀಡಬಾರದು ಎಂದು ಇಲಾಖೆಯ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವ್ಯಕ್ತಿಯೊಂದಿಗೆ ಇಲಾಖೆ ಯಾವುದೇ ಯೋಜನೆಯ ಬಗ್ಗೆ ಪತ್ರ ವ್ಯವಹಾರಗಳನ್ನು ಮಾಡಿಲ್ಲ. ಹಾಗೂ ಈ ವ್ಯಕ್ತಿಗೂ ಇಲಾಖೆಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಉಪನಿರ್ದೇಶಕರು ಸ್ಪಷ್ಟಪಡಿಸಿದ್ದು, ಸಾರ್ವಜನಿಕರು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕು ಎಂದು ವಿನಂತಿಸಿದ್ದಾರೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *