ಶಿವಮೊಗ್ಗ (shivamogga), ಜುಲೈ 04 : ಶಿವಮೊಗ್ಗದ ಮಾಚೇಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳ ವ್ಯಾಪ್ತಿಯಲ್ಲಿ, ಜುಲೈ 05 ರಂದು ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಜು.05 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆಯು ಜುಲೈ 04 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ವಿವರ : ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ,
ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಮೆ|| ಈ.ರಾಮಮೂರ್ತಿ ಮಿನರಲ್ಸ್ ಪ್ರೈ.ಲಿ., ಕೆ.ಎಂ.ಎಫ್.ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


