ವರದಿ : ಬಿ. ರೇಣುಕೇಶ್
ಶಿವಮೊಗ್ಗ (shivamogga), ಜುಲೈ 06: ಮಲೆನಾಡಿನಲ್ಲಿ ಮುಂಗಾರು ಮಳೆಯ ಕಣ್ಣಾಮುಚ್ಚಾಲೆ ಮುಂದುವರಿದಿದೆ. ಇತ್ತೀಚೆಗೆ ಮಳೆ ಚುರುಕುಗೊಂಡಿದ್ದರೂ, ವಾಡಿಕೆಯ ಮಳೆಯಾಗಿಲ್ಲ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳು, ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಸಂಪೂರ್ಣ ಕಡಿಮೆಯಾಗಿದೆ.
ಈ ನಡುವೆ ಅತೀ ಕಡಿಮೆ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರು ಗ್ರಾಮದಲ್ಲಿರುವ ತುಂಗಾ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದೆ. ಈ ಕಾರಣದಿಂದ ಡ್ಯಾಂನಿಂದ ನದಿಗೆ ನೀರು ಹೊರ ಬಿಡಲಾಗುತ್ತಿದೆ.
ತುಂಗಾ ಡ್ಯಾಂನಿಂದ ನೀರು ಹೊರ ಬಿಡುತ್ತಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಕೆರೆಗಳಿಗೆ ಏತ ನೀರಾವರಿ ಯೋಜನೆಯಡಿ ತತ್’ಕ್ಷಣವೇ ನೀರು ಹರಿಸಬೇಕೆಂಬ ಆಗ್ರಹ ಸಂಬಂಧಿಸಿದ ಗ್ರಾಮಗಳ ಗ್ರಾಮಸ್ಥರಿಂದ ವ್ಯಕ್ತವಾಗಲಾರಂಭಿಸಿದೆ.
ಪ್ರಸ್ತುತ ಶಿವಮೊಗ್ಗ ತಾಲೂಕಿನ ಸಾಕಷ್ಟು ಗ್ರಾಮಗಳಲ್ಲಿನ ಬಹುತೇಕ ಕೆರೆಗಳಲ್ಲಿ, ನೀರಿನ ಸಂಗ್ರಹದ ಪ್ರಮಾಣ ಅತ್ಯಂತ ಕಡಿಮೆಯಿದೆ. ಪ್ರಸ್ತುತ ಬೀಳುತ್ತಿರುವ ಮಳೆಯಿಂದ ಕೆರೆಕಟ್ಟೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ನೀರು ಹರಿದುಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾದರೆ ಎಲ್ಲವೂ ಸರಿಯಾಗಲಿದೆ. ಒಂದು ವೇಳೆ ಮಳೆ ಕೊರತೆ ಮುಂದುವರೆದರೆ ಕೆರೆಗಳು ಭರ್ತಿಯಾಗುವುದಿಲ್ಲ.
ಇದರಿಂದ ಮುಂದಿನ ದಿನಗಳಲ್ಲಿ ಜಾನುವಾರುಗಳ ಕುಡಿಯುವ ನೀರು ಸೇರಿದಂತೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಲಿದೆ. ಬೋರ್’ವೆಲ್ ಗಳ ಅಂತರ್ಜಲ ಮಟ್ಟ ಗಂಭೀರ ಸ್ವರೂಪಕ್ಕೆ ಕುಸಿಯಲಿದೆ. ತೀವ್ರ ಸ್ವರೂಪದ ನೀರಿನ ಹಾಹಾಕಾರ ಎದುರಾಗುವ ಸಾಧ್ಯತೆಗಳಿವೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಾರೆ.
ಈ ಹಿನ್ನೆಲೆಯಲ್ಲಿ ಏತ ನೀರಾವರಿ ಯೋಜನೆಯಡಿ ಪೈಪ್ ಲೈನ್ ಮೂಲಕ ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳ ಕೆರೆಕಟ್ಟೆಗಳಿಗೆ ತುಂಗಾ ನದಿಯಿಂದ ನೀರು ಹರಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ ತುಂಗಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ.
ಈ ಕಾರಣದಿಂದ ತಕ್ಷಣವೇ ಕೆರೆಗಳಿಗೆ ನೀರು ಹರಿಸಲು ಸಣ್ಣ ನೀರಾವರಿ ಇಲಾಖೆ ಕ್ರಮಕೈಗೊಳ್ಳಬೇಕು. ಇದರಿಂದ ಕೆರೆಗಳಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಮಳೆ ಕೊರತೆ ಎದುರಾದರೂ ನೀರಿನ ಹಾಹಾಕಾರ ಸಮಸ್ಯೆಯಲ್ಲಿ ಕೊಂಚ ತಗ್ಗಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಡುತ್ತಾರೆ.
MLA ಶಾರದ ಪೂರ್ಯನಾಯ್ಕ್ ಗಮನಹರಿಸಲಿ?

*** ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳ ಕೆರೆಗಳಿಗೆ ತುಂಗಾ ನದಿಯಿಂದ ನೀರು ಹರಿಸುವುದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯನಾಯ್ಕ್ ಅವರು ಗಮನಹರಿಸಬೇಕಾಗಿದೆ. ಈ ಸಂಬಂಧ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಕಾಲಮಿತಿಯೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ.
Demand to release water from Tunga River to lakes in Shivamogga taluk | Shivamogga, July 04: The monsoon rains continue to be elusive in Malnad. Even though July has begun, there is no rain in the expected amount. Due to this, the water level in the reservoirs and lakes has completely reduced.
Meanwhile, the water level of the Tunga reservoir in Gajanur village of Shivamogga taluk, which has the lowest water storage capacity, reached its maximum level on July 04. Due to this, water is being released from the dam into the river.
Lift Irrigation Project: In the wake of the release of water from the Tunga Dam, the villagers of the concerned villages have started expressing their demand for immediate release of water to the lakes in Shivamogga taluk under the lift irrigation project.


