shimoga news | ಎಸ್ಐಆರ್ ಕರ್ತವ್ಯನಿರತ ಬಿಎಲ್ಓ ನಿಧನ : ಮೃತರ ಮನೆಗೆ ಡಿಸಿ ಭೇಟಿ – ಸಾಂತ್ವನ

Shivamogga, July 07: A booth-level female officer and teacher named Manjula (50), who was busy with the SIR process, died on Monday. District Magistrate Prabhulinga Kavalikatti and officials visited the deceased's house on Tuesday, had darshan of the body and offered condolences to the family.

ಶಿವಮೊಗ್ಗ, ಜುಲೈ 07 : ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬೂತ್ ಮಟ್ಟದ ಮಹಿಳಾ ಅಧಿಕಾರಿ, ಶಿಕ್ಷಕಿ ಮಂಜುಳಾ(50) ಎಂಬುವರು ಸೋಮವಾರ ಮೃತಪಟ್ಟಿದ್ದು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಅಧಿಕಾರಿಗಳು ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಪಾರ್ಥೀವ ಶರೀರದ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಭದ್ರಾವತಿ ತಾಲ್ಲೂಕಿನ ಕಲ್ಲಾಪುರ ಬಳಿ, ಕೋಡಿ ಹೊಸೂರು ಗ್ರಾಮದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾಗ ಇದ್ದಕ್ಕಿದ್ದಂತೆ ಮಂಜುಳಾ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು. ಮೃತರ ಪಾರ್ಥಿವ ಶರೀರದ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಅಧಿಕಾರಿಗಳು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಕರ್ತವ್ಯದಲ್ಲಿದ್ದಾಗಲೇ ಮರಣ ಹೊಂದಿದ ಬಿಎಲ್‌ಓ ಅವರ ಕುಟುಂಬಕ್ಕೆ ಸರ್ಕಾರದ ನಿಯಮಾವಳಿಗಳನ್ವಯ ಸಿಗಬೇಕಾದ ಸೌಲಭ್ಯ ಹಾಗೂ ಪರಿಹಾರದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್, ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ, ತಹಶೀಲ್ದಾರ್ ಹಾಜರಿದ್ದರು.

Shivamogga, July 07: A booth-level female officer and teacher named Manjula (50), who was busy with the SIR process, died on Monday. District Magistrate Prabhulinga Kavalikatti and officials visited the deceased’s house on Tuesday, had darshan of the body and offered condolences to the family.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *