ಶಿವಮೊಗ್ಗ, ಜುಲೈ 21: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಯುವಕನೋರ್ವನಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-1) ಆದೇಶ ಹೊರಡಿಸಿದೆ.
ಶಿಕಾರಿಪುರ ತಾಲೂಕಿನ 23 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. (ಪೋಕ್ಸೋ ಪ್ರಕರಣದಲ್ಲಿ ಆರೋಪಿ – ಅಪರಾಧಿಗಳ ವೈಯಕ್ತಿಕ ವಿವರ ಪ್ರಕಟಿಸುವಂತಿಲ್ಲ)
ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನಲೆ: 2024 ರಲ್ಲಿ ಶಿಕಾರಿಪುರ ತಾಲೂಕಿನ 23 ವರ್ಷದ ಯುವಕನು, 15 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಅಂದು ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಆಗಿದ್ದ ಪುಷ್ಪಾ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ (ಚಾರ್ಜ್ಶೀಟ್) ಸಲ್ಲಿಸಿದ್ದರು.
Shivamogga, 21: The Additional District and Sessions Court (FTSC-1) in Shivamogga has sentenced a young man to three years in prison and imposed a fine of ₹50000 in a case involving the harassment of a girl.

