shimoga news | ಶಿವಮೊಗ್ಗ : ಕ್ರಷರ್ ಉದ್ಯಮಿ ಆತ್ಮಹತ್ಯೆಗೆ ಶರಣು!

dead body

ಶಿವಮೊಗ್ಗ (shivamogga), ಜುಲೈ 25: ಹೋಟೆಲ್ ವೊಂದರಲ್ಲಿ ಕ್ರಷರ್ ಉದ್ಯಮಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಿಗಾರ್ ಯಾನೆ ಬಸವರಾಜ್ (42) ಆತ್ಮಹತ್ಯೆಗೆ ಶರಣಾದವರೆಂದು ಗುರುತಿಸಲಾಗಿದೆ.

ನಗರದ ಹೋಟೆಲ್ ವೊಂದರಲ್ಲಿ ಕೊಠಡಿಯೊಂದನ್ನು ನವೀನ್ ಅವರು ಬಾಡಿಗೆ ಪಡೆದುಕೊಂಡಿದ್ದರು. ಸಾಲದ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

Shivamogga: Crusher businessman commits suicide! | Shivamogga, July 25: An incident has taken place in Shivamogga city where a crusher businessman committed suicide by hanging himself in a hotel.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *