ಶಿವಮೊಗ್ಗ (shivamogga), ಆಗಸ್ಟ್ 02 : ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೀಳುತ್ತಿರುವ ಧಾರಾಕಾರ ಮಳೆಯಿಂದ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂಗೆ ಭಾರೀ ಪ್ರಮಾಣದ ಒಳಹರಿವು ಕಂಡುಬಂದಿದೆ.
ಆಗಸ್ಟ್ 02 ರ ಬೆಳಿಗ್ಗೆ 8 ಗಂಟೆ ಮಾಹಿತಿಯಂತೆ, ಡ್ಯಾಂನ ಒಳಹರಿವು 77,580 ಕ್ಯೂಸೆಕ್ ಗೆ ಏರಿಕೆಯಾಗಿದೆ! ಪ್ರಸ್ತುತ ಮುಂಗಾರು ಅವಧಿಯಲ್ಲಿ ದಾಖಲಾದ ಅತೀ ಹೆಚ್ಚು ಒಳಹರಿವು ಇದಾಗಿದೆ.
ಡ್ಯಾಂನ ನೀರಿನ ಮಟ್ಟ 1781.85 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂನಲ್ಲಿ 3.90 ಅಡಿಯಷ್ಟು ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ದಿನದಂದು ಲಿಂಗನಮಕ್ಕಿ ಡ್ಯಾಂನ ನೀರಿನ ಮಟ್ಟ 1811.40 ಅಡಿಯಿತ್ತು. ಪ್ರಸ್ತುತ ಮುಂಗಾರು ಮಳೆಯ ತೀವ್ರ ಕೊರತೆಯಿಂದ, ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಸರಿಸುಮಾರು 30 ಅಡಿಯಷ್ಟು ಕಡಿಮೆ ನೀರು ಸಂಗ್ರಹವಾಗಿದೆ.
ಸದ್ಯ ಕಳೆದೆರೆಡು ದಿನಗಳಿಂದ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದೇ ರೀತಿ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿದರೆ ಲಿಂಗನಮಕ್ಕಿ ಡ್ಯಾಂ ನೀರಿನ ಸಂಗ್ರಹದಲ್ಲಿ ಮತ್ತಷ್ಟು ಏರಿಕೆಯಾಗಲಿದೆ.
Massive Inflow into Linganamakki Dam! Shivamogga, August 02: Due to heavy rainfall across the catchment area, the state’s major hydroelectric power generation center — Linganamakki Dam — has recorded a massive inflow. As of 8 AM on August 02, the dam’s inflow has surged to 77,580 cusecs! This marks the highest inflow recorded during the current monsoon season.

