shimoga drinking water | ಶಿವಮೊಗ್ಗದ ಕುಡಿಯುವ ನೀರು ಪೂರೈಕೆ : ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕರ ಮನವಿಯೇನು?

Shimoga, August 08: Considering the future growth of Shimoga city and its increasing population, there is a need for a new water purification plant to treat and supply water from the Tunga Dam, said Shimoga City MLA S. N. Channabasappa. He was speaking at the progress review meeting held on August 08 at the Shimoga Deputy Commissioner’s office auditorium, chaired by District In-charge Minister Madhu Bangarappa.

ಶಿವಮೊಗ್ಗ (shivamogga), ಆಗಸ್ಟ್ 08: ಶಿವಮೊಗ್ಗ ನಗರದ ಭವಿಷ್ಯದ ಬೆಳವಣಿಗೆ, ಜನಸಂಖ್ಯೆ ಗಮನದಲ್ಲಿಟ್ಟುಕೊಂಡು ತುಂಗಾ ಡ್ಯಾಂನಿಂದ ನೀರು ಶುದ್ಧೀಕರಿಸಿ ಪೂರೈಕೆ ಮಾಡಲು, ಹೊಸ ಶುದ್ಧೀಕರಣ ಘಟಕದ ಅಗತ್ಯವಿದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 08 ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿವಮೊಗ್ಗ ನಗರದ ಭವಿಷ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ನೂತನ ನೀರು ಶುದ್ಧೀಕರಣ ಘಟಕ ಸ್ಥಾಪನೆಯ ಅಗತ್ಯವಿದೆ. ಈಗಾಗಲೇ ಜಾಗ ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಯೋಜನೆಗೆ ಅಗತ್ಯವಿರುವ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ತಕ್ಷಣ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ.

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತಂತೆ ಚರ್ಚಿಸಲಾಗುವುದು. ಈ ಹಿನ್ನೆಲೆಯಲ್ಲ ತಕ್ಷಣವೇ ಸದರಿ ಯೋಜನೆಗೆ ಸಂಬಂಧಿಸಿದ ಡಿಪಿಆರ್ ಸಿದ್ದಪಡಿಸುವಂತೆ ಶಾಸಕರು ಆಗ್ರಹಿಸಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ 160 ಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಅಗತ್ಯವಿರುವ ಚಾಪೆ, ಜಮಖಾನ, ಅಡುಗೆ ಕುಕ್ಕರ್ ಗಳನ್ನು ಜಿಲ್ಲಾ ಪಂಚಾಯ್ತಿವತಿಯಿಂದ ಅಂದಾಜುಪಟ್ಟಿ ತಯಾರಿಸಿ ತಕ್ಷಣವೇ ಒದಗಿಸಬೇಕು. ಮಳೆಯಿಂದ ಹಾನಿಗೊಳಗಾದ ಶಾಲೆ, ಅಂಗನವಾಡಿ ಕಟ್ಟಡಗಳನ್ನು ಶೀಘ್ರ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಳೆಯಿಂದ ಮನೆಗೆ ಹಾನಿಯಾದ ವೇಳೆ ನೀಡಲಾಗುತ್ತಿದ್ದ 5 ಲಕ್ಷ ರೂ. ಪರಿಹಾರವನ್ನು 1.20 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ. ತಕ್ಷಣವೇ ಇದನ್ನು ಈ ಹಿಂದಿನಂತೆ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಬೇಕು ಎಂದು ಇದೇ ವೇಳೆ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಗ್ರಹಿಸಿದ್ದಾರೆ.

Shimoga, August 08: Considering the future growth of Shimoga city and its increasing population, there is a need for a new water purification plant to treat and supply water from the Tunga Dam, said Shimoga City MLA S. N. Channabasappa. He was speaking at the progress review meeting held on August 08 at the Shimoga Deputy Commissioner’s office auditorium, chaired by District In-charge Minister Madhu Bangarappa.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *