Thirthahalli news | Thirthahalliತೀರ್ಥಹಳ್ಳಿಯ ಜೀವ ರಕ್ಷಕ ಪೊಲೀಸ್ ಸಿಬ್ಬಂದಿಗೆ ಇಲಾಖೆಯ ಅಭಿನಂದನೆ

Shimoga, August 09: Recently, during a landslide in Indiranagar Thirthahalli town, police staff member Lokesh M. V. rescued a man who was trapped under the soil. In recognition of his brave act the police department has extended its appreciation to him.

ಶಿವಮೊಗ್ಗ, ಆಗಸ್ಟ್ 09: ಇತ್ತೀಚೆಗೆ ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದಲ್ಲಿ ಉಂಟಾದ ಗುಡ್ಡ ಕುಸಿತದ ವೇಳೆ, ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೋರ್ವರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ ಲೋಕೇಶ್ ಎಂ ವಿ ಅವರಿಗೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ.

02/08/2026 ರ ಮುಂಜಾನೆ ವೇಳೆ ಭಾರೀ ಮಳೆಯಿಂದ ಗುಡ್ಡ ಕುಸಿದು, ಕಾರ್ಮಿಕರು ನೆಲೆಸಿದ್ದ ಶೆಡ್ ಗಳ ಮೇಲೆ ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆ ಕರ್ತವ್ಯದಲ್ಲಿದ್ದ 112 ವಾಹನದ ಪೊಲೀಸ್ ಸಿಬ್ಬಂದಿ ಲೋಕೇಶ್ ಎಂ ವಿ ಸ್ಥಳಕ್ಕೆ ದೌಡಾಯಿಸಿದ್ದರು.

ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳೊಂದಿಗೆ ಅವಿರತ ಕಾರ್ಯಾಚರಣೆ ನಡೆಸಿ ಮಣ್ಣಿನಡಿ ಸಿಲುಕಿ ಬಿದ್ದಿದ್ದ ವ್ಯಕ್ತಿಯೋರ್ವರನ್ನು ರಕ್ಷಿಸುವಲ್ಲಿ ಸಫಲರಾಗಿದ್ದರು.

ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆ ಮತ್ತು ರಕ್ಷಣಾ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದೆ.

Shimoga, August 09: Recently, during a landslide in Indiranagar, Thirthahalli  town, police staff member Lokesh M. V. rescued a man who was trapped under the soil. In recognition of his brave act, the police department has extended its appreciation to him.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *