ಶಿವಮೊಗ್ಗ (shivamogga), ಆಗಸ್ಟ್ 15 : ಶಿವಮೊಗ್ಗ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ನೆಲೆಯಾಗಿದ್ದು, ಶಾಂತವೇರಿ ಗೋಪಾಲಗೌಡರು, ಕಡಿದಾಳು ಮಂಜಪ್ಪನವರು ಹಾಗೂ ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ಈಸೂರಿನ ಹೋರಾಟಗಾರರ ತ್ಯಾಗವು ನಮಗೆಲ್ಲರಿಗೂ ಸದಾ ಸ್ಪೂರ್ತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 80 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿ ಸಂದೇಶ ನೀಡಿರುವ ಅವರು, “ಸ್ವಾತಂತ್ರ್ಯ ಎಂದರೆ ಕೇವಲ ಧ್ವಜ ಹಾರಿಸುವುದಲ್ಲ, ಪ್ರತಿಯೊಬ್ಬ ಮನುಷ್ಯನೂ ಗೌರವದಿಂದ ಬದುಕುವ ವಾತಾವರಣ ನಿರ್ಮಿಸುವುದೇ ನಿಜವಾದ ಸ್ವಾತಂತ್ರ್ಯ. ಹಸಿವು, ಬಡತನ ಮತ್ತು ಅಸಮಾನತೆಯ ವಿರುದ್ಧದ ಹೋರಾಟವೇ ನಮ್ಮ ಇಂದಿನ ಕರ್ತವ್ಯ” ಎಂದಿದ್ದಾರೆ.
18 ಸಾವಿರ ಮಕ್ಕಳು ಭಾಗಿ: ವಿವಿಧ ಶಾಲಾ-ಕಾಲೇಜುಗಳಿಂದ ಸುಮಾರು 18000 ಮಕ್ಕಳು ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನಸಭಾ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ,
ರಾಜ್ಯ ಜವಳ ಮೂಲಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್, ರಾಜ್ಯ ಎಸ್ ಸಿ, ಎಸ್ ಟಿ, ಅಲೆಮಾರಿಗಳ ಅಭಿವೃದ್ದಿ ಸಂಘದ ಅಧ್ಯಕ್ಷೆ ಪಲ್ಲವಿ, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ,ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ,ಮಹಾನಗರಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಎಸಿ, ತಹಶೀಲ್ದಾರ್, ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
80th Independence Day Celebrations in Shivamogga: Development of the country on the path of self-respect of Esur – S. Madhu Bangarappa
Shivamogga, August 15: Shivamogga district is the historical base of the freedom struggle, and the sacrifices of Shantaveri Gopalagowda, Kadidalu Manjappa and the fighters of Esur who fought bravely against the British have always been an inspiration to all of us, said District In-charge and Minister for School Education and Literacy S. Madhu Bangarappa.

