ಭದ್ರಾ ಡ್ಯಾಂನಿಂದ ನೀರು : ಬೆಂಗಳೂರಿನಲ್ಲಿ ಮಹತ್ವದ ಸಭೆ – ಸಿಎಂ ಭೇಟಿಗೆ ನಿರ್ಧಾರ!

%%title%% %%page%% %%sep%% %%sitename%% Water Release from Bhadra Dam to Canals: Crucial Meeting in Bengaluru – Decision to Meet the CM! Bengaluru, August 18: S. Madhu Bangarappa, Minister for School Education and Literacy and Minister in-charge of Shivamogga district, presided over the 89th meeting of the 'Bhadra Project Irrigation Advisory Committee' held in Room No. 318 of Vikasa Soudha, Bengaluru. He conducted extensive deliberations regarding the release of water for the 2026-27 monsoon season to the command area of ​​the Bhadra project.

ಬೆಂಗಳೂರು (bengaluru), ಆಗಸ್ಟ್‌ 18: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 318 ರಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆಯು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು.

ಸಭೆಯಲ್ಲಿ ಮಲೆನಾಡು ಹಾಗೂ ಜಲಾನಯನ ಪ್ರದೇಶಗಳಲ್ಲಿನ ಮಳೆಯ ನೈಜ ಪರಿಸ್ಥಿತಿ ಮತ್ತು ಭದ್ರಾ ಜಲಾಶಯದ ಪ್ರಸ್ತುತ ನೀರಿನ ಸಂಗ್ರಹದ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಯಿತು. ಪ್ರಸ್ತುತ ಜಲಾಶಯದಲ್ಲಿ ಲಭ್ಯವಿರುವ ನೀರಿನ ಮಟ್ಟ ಹಾಗೂ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣದ ಕುರಿತು ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.

ರೈತ ಬಂಧುಗಳ ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಒದಗಿಸುವ ಸಂಬಂಧ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಿ, ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಮತ್ತು ಕಾಲಮಿತಿಯೊಳಗೆ ಸೂಕ್ತ ಕ್ರಮಕೈಗೊಂಡು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಕೆ.ಎಸ್. ಬಸವಂತಪ್ಪ, ಶಾಸಕರಾದ ಶಾರದಾ ಪೂರ್ಯನಾಯ್ಕ್, ಬಿ.ಕೆ ಸಂಗಮೇಶ್ವರ್, ಡಿ.ಜಿ ಶಾಂತನಗೌಡ, ಬಲ್ಕೀಸ್ ಬಾನು ಸೇರಿದಂತೆ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಮಾಜಿ ಶಾಸಕರು, ರೈತ ಮುಖಂಡರುಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Water Release from Bhadra Dam to Canals: Crucial Meeting in Bengaluru – Decision to Meet the CM! Bengaluru, August 18: S. Madhu Bangarappa, Minister for School Education and Literacy and Minister in-charge of Shivamogga district, presided over the 89th meeting of the ‘Bhadra Project Irrigation Advisory Committee’ held in Room No. 318 of Vikasa Soudha, Bengaluru. He conducted extensive deliberations regarding the release of water for the 2026-27 monsoon season to the command area of ​​the Bhadra project.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *