shimoga news | ಈದ್ ಮಿಲಾದ್ :  ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧಿಸಿ ಡಿಸಿ ಆದೇಶ

shimoga dc prabhu lnga kavaligatti

ಶಿವಮೊಗ್ಗ (shivamogga), ಆಗಸ್ಟ್ 25: ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ, ಆಗಸ್ಟ್ 25 ರಿಂದ 28 ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ‍್ಯಾಲಿಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35(3) ರಡಿ ನೀಡಿರುವ ಅಧಿಕಾರವನ್ನು ಬಳಸಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ದಿನಾಂಕ 25-08-2026 ರಿಂದ 28-08-2026 ರವರೆಗೆ ನಿಷೇಧ ಜಾರಿಯಲ್ಲಿರುತ್ತದೆ. ಆಗಸ್ಟ್ 26 ರಂದು ಈದ್ ಮಿಲಾದ್ ಆಚರಣೆ ನಡೆಯಲಿದ್ದು, ಸೌಹಾರ್ದತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈದ್ ಮಿಲಾದ್ ಆಚರಣೆ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ, ಆಗಸ್ಟ್ 25: ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದ್ದು, ಮೆರವಣಿಗೆಯ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದುಗಳನ್ನು ಬಳಸುವುದರಿಂದ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಹಾಗೂ ಇತರ ಧರ್ಮೀಯರ ಭಾವನೆಗಳಿಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Shivamogga, August 25: In the wake of the Eid Milad festival celebrations in the district, with the aim of maintaining law and order and public peace, the District Collector and District Magistrate Prabhulinga Kavalikatti has issued an order banning bike rallies from August 25 to 28 across the district.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *