ಸಾಗರ (sagara), ಆಗಸ್ಟ್ 26: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮಡಸೂರು ಗ್ರಾಮದ ವಡ್ಡಿನಕೆರೆ ಸಮೀಪ, ವ್ಯಕ್ತಿಯೋರ್ವರನ್ನು ಕೊಲೆ ಮಾಡಿರುವ ಘಟನೆ ಆಗಸ್ಟ್ 25 ರ ರಾತ್ರಿ ನಡೆದಿದೆ.
ಆನಂದ್ (38) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕುತ್ತಿಗೆ ಭಾಗಕ್ಕೆ ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಘಟನಾ ಸ್ಥಳಕ್ಕೆ ಎಎಸ್ಪಿ ಕಾರಿಯಪ್ಪ, ಬೆನಕ ಪ್ರಸಾದ್, ಇನ್ಸ್’ಪೆಕ್ಟರ್ ಸಂತೋಷ್ ಶೆಟ್ಟಿರವರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Sagara, August 26: An incident of murder of a person took place on the night of August 25 near Vaddinakere in Madasuru village of Sagara taluk, Shivamogga district.

