hanagere katte village | ಹಣಗೆರೆಕಟ್ಟೆಯ ಚೌಡೇಶ್ವರಿ ದೇವಾಲಯ – ಸೈಯದ್ ಸಾದತ್ ದರ್ಗಾದಲ್ಲಿ 1 ಕೋಟಿ ರೂ.ಗೂ ಅಧಿಕ ಕಾಣಿಕೆ ಸಂಗ್ರಹ!

Shimoga, September 03: At the Hanegerekatte Sri Chowdeshwari Temple and the Syed Sadat Dargah in Tirthahalli taluk — places known for harmony and unity — the counting of offerings in the donation boxes was carried out.

ಶಿವಮೊಗ್ಗ (shivamogga), ಸೆಪ್ಟೆಂಬರ್ 03: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೌಹಾರ್ದ – ಭಾವೈಕ್ಯತೆಯ ತಾಣವಾದ ಹಣಗೆರೆಕಟ್ಟೆಯ ಶ್ರೀ ಚೌಡೇಶ್ವರಿ ದೇವಾಲಯ ಮತ್ತು ಸೈಯದ್ ಸಾದತ್ ದರ್ಗಾದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಒಟ್ಟಾರೆ 1,01,73,650 ರೂ. ಸಂಗ್ರಹವಾಗಿದೆ. ಇದರ ಜೊತೆಗೆ ಭಕ್ತಾದಿಗಳಿಂದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳೂ ಕಾಣಿಕೆಯಾಗಿ ಸ್ವೀಕೃತಗೊಂಡಿರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಗ್ರಹವಾದ ನಗದು ಮೊತ್ತವನ್ನು ನಿಯಮಾನುಸಾರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.  ಸದರಿ ಹುಂಡಿ ಎಣಿಕೆ ಕಾರ್ಯವನ್ನು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್. ಹೇಮಂತ್ ಕುಮಾರ್ ಹಾಗೂ ಉಪ ವಿಭಾಗಾಧಿಕಾರಿಗಳಾದ ಡಾ.ಮೈತ್ರಿರವರು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಂಜಿತ್, ಮುಜರಾಯಿ ತಹಸೀಲ್ದಾರ್ ಆರ್. ಪ್ರದೀಪ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆರೆಹಳ್ಳಿ ರಾಮಪ್ಪ ಹಾಗೂ ಸಮಿತಿಯ ಸರ್ವ ಸದಸ್ಯರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Shimoga, September 03: At the Hanegerekatte Sri Chowdeshwari Temple and the Syed Sadat Dargah in Tirthahalli taluk — places known for harmony and unity — the counting of offerings in the donation boxes was carried out.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *