ಶಿವಮೊಗ್ಗ, ಸೆಪ್ಟೆಂಬರ್ 12: ಮಿತಿಮೀರಿದ ವೇಗದಲ್ಲಿ ಆಗಮಿಸಿದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ನಗರದ ಹೊರವಲಯ ಚನ್ನಮುಂಭಾಪುರದ ಕೃಷಿ ಕಾಲೇಜ್ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸೆಪ್ಟೆಂಬರ್ 11 ರ ರಾತ್ರಿ 8.30 ರ ಸರಿಸುಮಾರಿನಲ್ಲಿ ನಡೆದಿದೆ.
ಶಿವಮೊಗ್ಗದ ಸೋಮಿನಕೊಪ್ಪ ನಿವಾಸಿ ಆನಂದಪ್ಪ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಯುವ ಪತ್ರಕರ್ತ ರಾಕೇಶ್ ಅವರ ತಂದೆಯಾಗಿದ್ದಾರೆ.
ಚನ್ನಮುಂಭಾಪುರದಲ್ಲಿರುವ ಸಂಬಂಧಿಯೋರ್ವರ ಮನೆಗೆ ಆನಂದಪ್ಪರವರು ತೆರಳಿದ್ದರು. ರಸ್ತೆ ದಾಟುವ ವೇಳೆ ಶಿವಮೊಗ್ಗದಿಂದ ಆನವಟ್ಟಿ ಕಡೆಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕ ಬಸ್ ಡಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡ ಆನಂದಪ್ಪರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಸ್ ಚಾಲಕನ ಅಜಾಗರೂಕ, ವೇಗದ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಘಟನಾ ಸ್ಥಳಕ್ಕೆ ಪೂರ್ವ ಟ್ರಾಫಿಕ್ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪಗಳ ಅವ್ಯವಸ್ಥೆ : ನಾಗರಿಕರ ಆಕ್ರೋಶ
*** ಚನ್ನಮುಂಭಾಪುರ ಸಮೀಪದ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಹೆಚ್ಚಿದೆ. ಮತ್ತೊಂದೆಡೆ, ಮಿತಿಮೀರಿದ ವೇಗದಲ್ಲಿ ವಾಹನಗಳು ಸಂಚರಿಸುತ್ತವೆ. ಆದರೆ ಹೆದ್ದಾರಿಯ ಹಲವೆಡೆ ಬೀದಿ ದೀಪಗಳ ವ್ಯವಸ್ಥೆ ಸಮರ್ಪಕವಾಗಿಲ್ಲ. ಇದರಿಂದ ಸಂಜೆ ವೇಳೆ ಪಾದಚಾರಿಗಳು ಹೆದ್ದಾರಿಯ ಇಕ್ಕೆಲಗಳಲ್ಲಿ ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ. ಕಳೆದ ಹಲವು ವಾರಗಳಿಂದ ಬೀದಿ ದೀಪಗಳ ದುರಸ್ತಿಗೆ ಮನವಿ ಮಾಡಿದರೂ ಇಲ್ಲಿಯವರೆಗೂ ದುರಸ್ತಿಯಾಗಿಲ್ಲ. ಕಾಲಮಿತಿಯೊಳಗೆ ಕ್ರಮಕೈಗೊಳ್ಳದಿದ್ದರೆ ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸ್ಥಳೀಯ ನಾಗರಿಕರು ಎಚ್ಚರಿಕೆ ನೀಡಿದ್ದಾರೆ.
Shivamogga – Private Bus Collision: Man Dies on the Spot! | Shivamogga, September 12: A tragic incident occurred on the outskirts of Shivamogga city near Channamumbapur Agricultural College on the state highway at around 8:30 PM on September 11. A private bus speeding recklessly hit a man crossing the road resulting in his immediate death.

