shimoga news | ಶಿವಮೊಗ್ಗ : ಬಸ್ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕ ‘ಅಕ್ಕ ಪಡೆ’ ವಶಕ್ಕೆ..!

Shimoga, September 16: At the KSRTC bus stand in Shimoga city a youth was taken into custody by the Akka Pade police unit after being accused of misbehaving with a young woman.

ಶಿವಮೊಗ್ಗ (shivamogga), ಸೆಪ್ಟೆಂಬರ್ 16: ಶಿವಮೊಗ್ಗ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಯುವತಿಯ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಯುವಕನೋರ್ವನನ್ನು ‘ಅಕ್ಕ ಪಡೆ’ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಆರೋಪಿತ ಯುವಕನು ಬಸ್ ನಿಲ್ದಾಣದಲ್ಲಿದ್ದ ಯುವತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ಈ ಕುರಿತಂತೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ‘ಅಕ್ಕ ಪಡೆ’ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿ, ಆರೋಪಿತ ಯುವಕನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Shimoga, September 16: At the KSRTC bus stand in Shimoga city a youth was taken into custody by the Akka Pade police unit after being accused of misbehaving with a young woman.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →

Leave a Reply

Your email address will not be published. Required fields are marked *