ಶಿವಮೊಗ್ಗ (shivamogga), ಸೆಪ್ಟೆಂಬರ್ 16: ಶಿವಮೊಗ್ಗ ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 16 ರಂದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಮಿತಿಯ ಸಭೆ ನಡೆಯಿತು.
ಸಭೆಯಲ್ಲಿ ಬಗರ್ ಹುಕುಂ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ಹಾಗೂ ಸಂಬಂಧಿತ ವಿಷಯಗಳ ಕುರಿತಂತೆ ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದು, ಅರ್ಜಿಗಳ ವಿಲೇವಾರಿ ಕುರಿತಂತೆ ಚರ್ಚೆ ನಡೆಸಿದರು.
ಅರ್ಜಿ ವಿಲೇವಾರಿ ಹಾಗೂ ಮಾಹಿತಿ ಸಂಗ್ರಹಣೆ ಕುರಿತಂತೆ ಕೆಲ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಗರ್ ಹುಕುಂ ರೈತರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ತಾಕೀತು ಮಾಡಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಸರ್ಕಾರದ ನಿಯಮಾನುಸಾರ ಭೂಹಕ್ಕು ದೊರೆಯುವಂತೆ ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ತಹಶೀಲ್ದಾರ್ ರಾಜೀವ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.
Shivamogga: Why did MLA Sharada Puryanaik express outrage? | Shivamogga, September 16: A meeting of the ‘Bagar Hukum’ committee was held on September 16 at the Shivamogga City Tahsildar’s office hall, presided over by Sharada Puryanaik, the MLA for the Shivamogga Rural constituency.
During the meeting, the MLA gathered information from officials regarding the applications submitted under the ‘Bagar Hukum’ scheme and related matters, and held discussions on the disposal of these applications.

