ಶಿವಮೊಗ್ಗ (shivamogga), ಸೆಪ್ಟೆಂಬರ್ 21: ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ, ಉದ್ಯೋಗಾಕಾಂಕ್ಷಿಗಳಿಗೆ 24-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಸದರಿ ನೇರ ಸಂದರ್ಶನದಲ್ಲಿ ಆರ್-ಕ್ಯೂಬ್ ಅಕಾಡೆಮಿ ಪ್ರೈ.ಲಿ. ಖಾಸಗಿ ಕಂಪನಿ ಭಾಗವಹಿಸುತ್ತಿದೆ. ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನವು ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಗುತ್ಯಪ್ಪ ಕಾಲೋನಿಯ ಪಂಪಾ ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606/9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Shivamogga: Job Opportunity in a Private Firm – Walk-in Interview on September 24
Shivamogga, September 21: A walk-in interview for job aspirants has been organized at the District Employment Exchange in Shivamogga on September 24, 2026 at 10:00 AM.
The private company ‘R-Cube Academy Pvt. Ltd.’ is participating in this interview drive and will select candidates for vacant positions through the walk-in interview process.
Educational Qualification: Candidates aged between 18 and 35 years who have completed any degree are eligible to participate. Entry is free; interested candidates may attend the interview directly, bringing their resumes and copies of their Aadhaar cards.
The interview will be held at the District Employment Exchange, located at Pampa Nagar, Gutyappa Colony, Sagar Road, Shivamogga city.
The Employment Officer stated that for further information, one may contact the District Employment Exchange in person or via telephone at 9380663606 or 9108235132.

