ಶಿವಮೊಗ್ಗ (shivamogga), ಸೆಪ್ಟೆಂಬರ್ 23: ಪ್ರೀತಿಸಿ ಮದುವೆಯಾಗಿದ್ದ ಯುವತಿಯ ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೆಪ್ಟೆಂಬರ್ 23 ರಂದು ತೀರ್ಪು ನೀಡಿದೆ.
ಶಿವಮೊಗ್ಗದ ಟಿಪ್ಪುನಗರದ ನಿವಾಸಿ ಅಬ್ದುಲ್ ಶೋಯೆಬ್ (26) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಶಿಕ್ಷೆಯ ಜೊತೆಗೆ 2.10 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೊಲೆಗೀಡಾದ ಯುವತಿ ಕುಟುಂಬಕ್ಕೆ 2.5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಅದೇಶಿಸಿದೆ.
ನ್ಯಾಯಾಧೀಶರಾದ ಪ್ರೀತಿ ಕೆ ಪಿ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪಿ ಓ ಪುಷ್ಪಾ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : ಅಪರಾಧಿ ಶೋಯೆಬ್ ನು 20 ವರ್ಷ ವಯೋಮಾನದ ಕೌಸರ್ ಫಿಜಾ ಎಂಬ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ. ತದನಂತರ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ. ಇಷ್ಟವಿಲ್ಲದಿದ್ದರೆ ತನ್ನನ್ನು ತೊರೆಯುವಂತೆ ಪತಿಗೆ ಪತ್ನಿ ಸೂಚಿಸಿದ್ದಳು.
ಇದರಿಂದ ಆಕ್ರೋಶಗೊಂಡ ಅಪರಾಧಿಯು, 16-10-2021 ರಂದು ಸಂಜೆ ನಗರದ ಅನುಪಿನಕಟ್ಟೆ ರಸ್ತೆಯ ಹೊನ್ನಪ್ಪ ಲೇಔಟ್ ಗೆ ಕಾರಿನಲ್ಲಿ ಪತ್ನಿಯನ್ನು ಕರೆದೊಯ್ದಿದ್ದ. ಚಾಕುವಿನಿಂದ ಚುಚ್ಚಿ, ಮಚ್ಚಿನಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ದೀಪಕ್ ಎಂ ಎಸ್ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
Murder of Wife from a Love Marriage: Life Imprisonment for Youth from Shivamogga’s Tippu Nagar! | Shivamogga, September 23: On September 23 the 2nd Additional District and Sessions Court in Shivamogga delivered a verdict sentencing a young man to life imprisonment for the murder of the woman he had married after falling in love.

