ಶಿವಮೊಗ್ಗ (shivamogga), ಸೆಪ್ಟೆಂಬರ್ 29: ಮಹಿಳೆಗೆ ಕಿರುಕುಳ ನೀಡಿದ ಪ್ರಕರಣದಲ್ಲಿ, ಮಹಿಳೆಯ ಪತಿ ಹಾಗೂ ಆತನ ಐವರು ಸಂಬಂಧಿಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್’ಟಿಸಿಸಿ – 1) ತೀರ್ಪು ನೀಡಿದೆ.
ಪತಿ ಸತೀಶ್ ಹಾಗೂ ಆತನ ಸಂಬಂಧಿಗಳಾದ ಮಂಜುನಾಥ್, ಹುಚ್ಚರಾಯ, ಮೇಘಾ, ಕುಮುದಾ, ಶೃತಿ ಜೈಲು ಶಿಕ್ಷೆಗೆ ಗುರಿಯಾದವರೆಂದು ಗುರುತಿಸಲಾಗಿದೆ.
ಶಿಕ್ಷೆಯ ಜೊತೆಗೆ 1.14 ಲಕ್ಷ ರೂ. ದಂಡ ವಿಧಿಸಲಾಗಿದೆ. ನೊಂದ ಮಹಿಳೆಗೆ 1.40 ಲಕ್ಷ ರೂ. ಪರಿಹಾರ ನೀಡುವಂತೆ 28-09-2026 ರಂದು ನೀಡಿದ ತೀರ್ಪಿನಲ್ಲಿ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 32 ವರ್ಷದ ಮಹಿಳೆಗೆ ಅಪರಾಧಿ ಸತೀಶನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ವಿವಾಹವಾಗಿದ್ದ. ಆದರೆ ನಂತರ ಅಪರಾಧಿಗಳು ಮಹಿಳೆಯನ್ನು ಮನೆಗೆ ಸೇರಿಸಿಕೊಳ್ಳದೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು. ಜೀವ ಬೆದರಿಕೆ ಹಾಕಿದ್ದರು.
ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ಹರೀಶ್ ಕೆ ಪಾಟೀಲ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
Shivamogga: 6 people sentenced to 1 year in jail and fined ₹1.14 lakh! | Shivamogga, September 29: Shivamogga’s Additional District and Sessions Court (FTCC-1) has sentenced a woman’s husband and five of his relatives to one year in prison in a case involving the harassment of the woman.

