ಶಿವಮೊಗ್ಗ (shivamogga), ಅಕ್ಟೋಬರ್ 01: ಶಿವಮೊಗ್ಗ ನಗರದ ಎಂ ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ಅಕ್ಟೋಬರ್ 03 ರಂದು 2 ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದೆ.
ವಿವರ: ಹೊಳೆಹೊನ್ನೂರು ವಿ ವಿ ಕೇಂದ್ರ, ಹೊಳಲೂರು ವಿ ವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿ ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ,
ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ,
ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ,
ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ,
ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಚಿಕ್ಕಲ್, ಗುರುಪುರ ಸುತ್ತಮುತ್ತ ಅ. 04 ರಂದು ಪವರ್ ಕಟ್
ಶಿವಮೊಗ್ಗ (shivamogga), ಅಕ್ಟೋಬರ್ 04: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 04.10.2026 ರಂದು ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 01 ಗಂಟೆಯಿಂದ ಸಂಜೆ 6 ರ ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ವಿವರ : ಚಿಕ್ಕಲ್, ಗುರುಪುರ, ಪುರಲೆ, ವೆಂಕಟೇಶ ನಗರ (ಹಸೂಡಿ ರಸ್ತೆ), ಶಾಂತಮ್ಮ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
Power disruption in various parts of Shivamogga city and taluk on October 3–4.

